ಲಕ್ಷ್ಮಿ ಹೆಬ್ಬಾಳಕರ್ ಅವರ ಕಾರು ಅಪಘಾತ:ಆಸ್ಪತ್ರೆಗೆ ದಾಖಲು

Spread the love

ಬೆಳಗಾವಿ: ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಕಾರು ಅಪಘಾತವಾಗಿದ್ದು ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗ್ಗೆ ಸುಮಾರು ಆರು ಗಂಟೆಗೆ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಲಕ್ಷ್ಮಿ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಡಾ. ರವಿ ಪಾಟೀಲ ತಿಳಿಸಿದ್ದಾರೆ

ಸಚಿವರ ಜೊತೆ ಅವರ ಸಹೋದರ, ಗನ್‌ಮ್ಯಾನ್, ಡ್ರೈವರ್ ಬಂದಿದ್ದಾರೆ,ಅವರಿಗೂ ಗಾಯಗಳಾಗಿದ್ದು, ಎಲ್ಲರಿಗೂ ಚಿಕಿತ್ಸೆ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಹೆಬ್ಬಾಳ್ಕರ್ ಅವರಿಗೆ ಸಿಟಿ ಸ್ಕ್ಯಾನ್ ಮಾಡಿದ್ದೇವೆ, ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ,ಚೇತರಿಸಿಕೊಳ್ಳುತ್ತಿದ್ದಾರೆ, ಬೆನ್ನಿನ ಮೂಳೆ ಮುರಿದಿದೆ,ಒಂದು ತಿಂಗಳು ವಿಶ್ರಾಂತಿಯ ಅಗತ್ಯವಿದೆ ಎಂದು ತಿಳಿಸಿದ್ದಾರೆ