ಪಾಕಿಸ್ತಾನ: ನಮ್ಮ ದೇಶದ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್‌ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ.
ಕೆಲವು ಅಪರಿಚಿತ ಬಂಧೂಕುದಾರಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
2001ರಲ್ಲಿ ರಾಂಪುರದಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಕಾಂಗ್ರೆಸ್ ಮೇಲಿನ ದಾಳಿ ಮತ್ತು 2006ರಲ್ಲಿ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮೇಲಿನ ಈ ಪ್ರಮುಖ ದಾಳಿಗಳಲ್ಲಿ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ.
ಐದು ವರ್ಷಗಳ ಅವಧಿಯಲ್ಲಿ ನಡೆಸಲಾದ ಈ ದಾಳಿಗಳು ಅನೇಕ ಜೀವಗಳನ್ನು ಬಲಿ ಪಡೆದಿತ್ತು.
ಖಾಲಿದ್ ಹಲವಾರು ವರ್ಷಗಳ ಕಾಲ ನೇಪಾಳದಲ್ಲಿ ನೆಲೆಸಿದ್ದ.ಅಲ್ಲದೆ ಸ್ಥಳೀಯ ಮಹಿಳೆಯನ್ನು ವಿವಾಹವಾಗಿದ್ದ. ನೇಪಾಳದವನಾದ ಈತ ಲಷ್ಕರ್-ಎ-ತೊಯ್ಬಾದ ಚಟುವಟಿಕೆಗಳನ್ನು ಸಂಘಟಿಸುತ್ತಿದ್ದನೆಂದು ಹೇಳಲಾಗಿದೆ.
ಇತ್ತೀಚೆಗೆ, ಖಾಲಿದ್ ತನ್ನ ಅಡಗುತಾಣವನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಮಟ್ಲಿಗೆ ಸ್ಥಳಾಂತರಿಸಿದ್ದನು. ಆತನ ಮುಖ್ಯ ಗಮನವು ಭಯೋತ್ಪಾದಕ ಕಾರ್ಯಾಚರಣೆಗಳಿಗೆ ನೇಮಕಾತಿ ಮತ್ತು ನಿಧಿಸಂಗ್ರಹಣೆಯಾಗಿತ್ತು ಎಂದು ಮೂಲಗಳು ತಿಳಿಸಿವೆ.