(ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ)
ಚಾಮರಾಜನಗರ : ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.
ಗುರುವಾರವಾದ ಬೆಳಿಗ್ಗೆ ಚಾಮರಾನಗರದ ಹರದನಹಳ್ಳಿ ಫಾರಂಗೆ ಹೊಂದಿಕೊಂಡ ರಸ್ತೆ ಸಮೀಪ ಈ ಘಟನೆ ನಡೆದಿದ್ದು ಸಾರ್ವಜನಿಕರು ತಲ್ಲಣಗೊಂಡಿದ್ದಾರೆ.
ಚಿರತೆ ದಾಳಿಯಿಂದ ವ್ಯಕ್ತಿಗೆ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿದ್ದರ ಪರಿಣಾಮ ಹೆಚ್ಚಿನ ಅನಾಹುತವಾಗಿಲ್ಲ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿರತೆ ಹೆದ್ದಾರಿ ಸಮೀಪ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
