ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಮೈಸೂರು: ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಹುಂಡಿ ಗ್ರಾಮದ ಫಾರ್ಮ್ ಹೌಸ್ನಲ್ಲಿ 2019ರ ಜನವರಿ 6ರಂದು ನಡೆದಿದ್ದ ಪ್ರಶಾಂತ್ ಕೊಲೆ ಪ್ರಕರಣದಲ್ಲಿ
ಇಬ್ಬರು ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.
ಆರೋಪಿಗಳಾದ ಲೋಕೇಶ್ ಮತ್ತು ಪ್ರಮೋದ್ ಎಂಬವರಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಅರೋಪಿಗಳು ಜಮೀನು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಪ್ರಶಾಂತ್ ಬೈದಿದ್ದಕ್ಕೆ ಕೋಪಗೊಂಡ ಆರೋಪಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು.ಇದು ಸಾಬೀತಾಗಿದ್ದು ಶಿಕ್ಷೆ ನೀಡಲಾಗಿದೆ.
ನ್ಯಾಯಾಧೀಶ ಅನಂತ್ ಹೆಚ್ ಅವರು ಆರೋಪಿಗಳಿಗೆ ಜೀವಾವಧಿ ಮತ್ತು ತಲಾ 1 ಲಕ್ಷ ರೂ. ದಂಡ, 2 ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ದಂಡದ ಶೇ.95 ರಷ್ಟನ್ನು ಮೃತನ ತಂದೆಗೆ ಪರಿಹಾರವಾಗಿ ನೀಡಲು ನ್ಯಾಯಾಧೀಶರು ಆದೇಶಿಸಿದ್ದಾರೆ.
