ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಆಶಿಹಾಳ ತಾಂಡಾಕ್ಕೆ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮ ಪಂಚಾಯತ್ ಮಾಜಿ ಸದಸ್ಯ
ಭೋದು ನಾಯಕ, ಆಶಿಹಾಳ ತಾಂಡಾದ ರೈತ ಮುಖಂಡ ತಿರುಪತಿ ನಾಯಕ ಅವರು ಮನವಿ ಪತ್ರ ಸಲ್ಲಿಸಿದರು.
ಲಿಂಗಸುಗೂರು ತಾಲೂಕಿನ ಖೈರವಾಡಗಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಆಶಿಹಾಳ ತಾಂಡಾದಲ್ಲಿ ಸಾರ್ವಜನಿಕರಿಗೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.
ಇದರ ಬಗ್ಗೆ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಸಲ ತಂದರೂ ಸಹ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರಮುಖ ಪತ್ರಿಕೆಗಳಲ್ಲೂ ಸಹ ಬಂದರು ಯಾವ ಅಧಿಕಾರಿಗಳು ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ, ನಮ್ಮ ತಾಂಡಾ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಮ್ಮ ತಾಂಡಾದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೂಡಲೇ ಸೂಕ್ತ ಮಾರ್ಗದರ್ಶನ ನೀಡಬೆಕೆಂದು ಹಾಗೂ ನಮ್ಮ ಆಶಿಹಾಳ ತಾಂಡಾದಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕೆಂದು ಲಿಂಗಸುಗೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ
ಭೋದು ನಾಯಕ ಮತ್ತು
ತಿರುಪತಿ ನಾಯಕ ಅವರು ತಾಂಡಾದ ಜನರ ಪರವಾಗಿ ಆಗ್ರಹಿಸಿದರು.
