ಮೈಸೂರು: ಲಯನ್ ಸಿ.ಆರ್. ದಿನೇಶ್ ಅವರು ಪ್ರತಿಷ್ಠಿತ ಔಟ್ಸ್ಟ್ಯಾಂಡಿಂಗ್ ಡಿಸ್ಟ್ರಿಕ್ಟ್ ಚೇರ್ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಜಿ 2025–26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಲಯನ್ ಕೆ.ಎಲ್. ರಾಜಶೇಖರ್ ಅವರ ನೇತೃತ್ವದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಪೀಸ್ ಪೋಸ್ಟರ್ ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಸಂಘಟಿಸಿ ಯಶಸ್ವಿಗೊಳಿಸಿದಕ್ಕಾಗಿ ಡಿಸ್ಟ್ರಿಕ್ಟ್ ಪೀಸ್ ಪೋಸ್ಟರ್ ಚೇರ್ಮನ್ ಲಯನ್ ಸಿ.ಆರ್. ದಿನೇಶ್ ಅವರಿಗೆ ಪ್ರತಿಷ್ಠಿತ “ಔಟ್ಸ್ಟ್ಯಾಂಡಿಂಗ್ ಡಿಸ್ಟ್ರಿಕ್ಟ್ ಚೇರ್ಮನ್” ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಜಿಲ್ಲೆಯಾದ್ಯಂತ ಶಾಲಾ ವಿದ್ಯಾರ್ಥಿಗಳಲ್ಲಿ ಶಾಂತಿ, ಸಹಬಾಳ್ವೆ, ಮಾನವೀಯ ಮೌಲ್ಯಗಳು ಮತ್ತು ಸೃಜನಾತ್ಮಕ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಪೀಸ್ ಪೋಸ್ಟರ್ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿ, ಹೆಚ್ಚಿನ ಸಂಖ್ಯೆಯ ಶಾಲೆಗಳು ಹಾಗೂ ವಿದ್ಯಾರ್ಥಿಗಳ ಭಾಗವಹಿಸುವಿಕೆಗೆ ಪ್ರೋತ್ಸಾಹ ನೀಡಿದ ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಲಯನ್ ಸಿ.ಆರ್. ದಿನೇಶ್ ಅವರು ಮಾತನಾಡಿ, ಈ ಗೌರವವು ತಮ್ಮೊಬ್ಬರದ್ದಲ್ಲ; 2025–26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಲಯನ್ ಕೆ.ಎಲ್. ರಾಜಶೇಖರ ಅವರ ಮಾರ್ಗದರ್ಶನ, ಜಿಲ್ಲಾ ಪದಾಧಿಕಾರಿಗಳು, ವಿವಿಧ ಲಯನ್ಸ್ ಕ್ಲಬ್ಗಳ ಅಧ್ಯಕ್ಷರು, ಸದಸ್ಯರು, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ದೊರೆತ ಯಶಸ್ಸಿನ ಫಲವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯಪಾಲ ಲಯನ್ ಕೆ.ಎಲ್. ರಾಜಶೇಖರ, ಜಿಲ್ಲಾ ಕ್ಯಾಬಿನೆಟ್ ಪದಾಧಿಕಾರಿಗಳು, ವಿವಿಧ ಲಯನ್ಸ್ ಕ್ಲಬ್ಗಳ ಅಧ್ಯಕ್ಷರು, ಸದಸ್ಯರು ಹಾಗೂ ಗಣ್ಯರು ಲಯನ್ ಸಿ.ಆರ್. ದಿನೇಶ್ ಅವರನ್ನು ಅಭಿನಂದಿಸಿದರು.
