ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ
ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ
ಸರ್ಕಾರಿ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.
ಸರಕಾರಿ ಅಧಿಕಾರಿಗಳ ಮನೆ,ಕಚೇರಿ ಮತ್ತಿತರೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ದೂರುಗಳು ಬಂದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಒಟ್ಟು 8 ಜನ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ದರ್ಶನ್ ಗೌಡ – ಪ್ರಥಮ ದರ್ಜೆ ಸಹಾಯಕ, ಜಿಲ್ಲಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ.ರಂಗನಾಥ್ ಹೆಚ್.ಎಂ – ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿಬಿಎಂಪಿ, .ಶ್ರೀದೇವಿ – ಜಿಲ್ಲಾ ನೋಂದಣಾಧಿಕಾರಿ, ಬೆಂಗಳೂರು.
ಹೆಚ್.ಆರ್. ರಮೇಶ್ – ಪೌರಾಯುಕ್ತರು, ನಗರಸಭೆ, ಮಡಿಕೇರಿ.
ಕಿರಣ್ ಕುಮಾರ್ ಬೈಂದೂರ್ – ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಹೆಸ್ಕಾಂ, ಹುಬ್ಬಳ್ಳಿ – ಧಾರವಾಡ.ರಾಜೇಶ್ವರಿ – ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಜೆಸ್ಕಾಂ, ಕಲಬುರಗಿ.ಮಾಣಿಕ್ ರಾವ್ – ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಬೀದರ್.
ಶಿವರಾಜು – ಹಾಸ್ಟೆಲ್ ಸೂಪರಿಂಟೆಂಡೆಂಟ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಡ್ಯ.ಇವರುಗಳ ಮೇಲೆ ಲೋಕಾಯುಕ್ತ ರೈಡ್ ಆಗಿದೆ.
