ಮೈಸೂರು: ಮೈಸೂರಿನ ಎ ಇ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಮಂಗಳವಾರ ಬೆಳ್ಳಂ ಬೆಳಿಗ್ಗೆ ಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆ, ಮೈಸೂರು ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಇ ರೇವಣ್ಣ ಅವರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಎಇ ಕಚೇರಿಯಲ್ಲಿ ಮೈಸೂರು ಲೋಕಾಯುಕ್ತ ಠಾಣೆ ಡಿವೈಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಆಸ್ತಿಪಾಸ್ತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
