ಮೈಸೂರು: ಲೋಕಾಯುಕ್ತ ಪೊಲೀಸರು ಮೈಸೂರಲ್ಲಿ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಮೈಸೂರು ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೈಸೂರು ನಗರ ಪಾಲಿಕೆ
ಜ್ಯೂನಿಯರ್ ಎಂಜಿನಿಯರ್ ಕೆ.ಆರ್.ಚಂದ್ರಶೇಖರ್, ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್ ಅಲ್ತಾಫ್ ಹುಸೇನ್ ಜಪ್ಪಾರ್ಪಿ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದರು.
ಮೈಸೂರು ನಗರದ ವಿಜಯನಗರ ಮೊದಲ, ಎರಡನೇ ಹಂತ ಸೇರಿ ಆರು ಕಡೆ ಹಾಗೂ ತಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಲಾಗಿದೆ.
ಅಕ್ರಮ ಆದಾಯ ಗಳಿಕೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸತತ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
