ಕಾರ್ಕಳ: ಮಿನಿ ಲಾರಿ ಹಾಗೂ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ಕು ಮಂದಿ ದುರ್ಮರಣ ಅಪ್ಪಿದ ಘಟನೆ ಕಾರ್ಕಳ ಬಳಿ ನಡೆದಿದೆ.
ಕಾರ್ಕಳ ತಾಲೂಕಿನ ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರುನ ಪಾಜೆಗುಡ್ಡೆ ಬಳಿ ಈ ಅಪಘಾತ ಸಂಭವಿಸಿದೆ.
ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಎಂಬವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ನತದೃಷ್ಟರು ಒಂದೇ ಬೈಕ್ ನಲ್ಲಿ ಹೋಗುತ್ತಿದ್ದರು.ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ.
ಸುದ್ದಿ ತಿಳಿದ ತಕ್ಷಣ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು,ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು.