ಯಳಂದೂರು: ಪ್ರತಿಯೊಬ್ಬ ಸರ್ಕಾರಿ ನೌಕರರು ರಾಷ್ಟ್ರಪ್ರೇಮ ಬೆಳಸಿಕೊಳ್ಳಿ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಮ್ಮನಪುರ ಮಹೇಶ್ ಸಲಹೆ ನೀಡಿದರು.
ಯಳಂದೂರು ಪಟ್ಟಣದ ಸರ್ಕಾರಿ ನೌಕರರ ಭವನದ ಅವರಣದಲ್ಲಿ ನಡೆದ 80 ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಅಮ್ಮನಪುರ ಮಹೇಶ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯನ್ನು ಅಭಿವೃದ್ಧಿ ಸಾಮಾಜಿಕ ನ್ಯಾಯ, ಶಾಂತಿ, ಸೌಹಾರ್ದತೆ ಮತ್ತು ಸಮೃದ್ದಿಯಲ್ಲಿ ಮುಂಚೂಣಿಯನ್ನಾಗಿಸಲು ನಮ್ಮ ಹೊಣೆಗಾರಿಕೆಯನ್ನು ನಿಷ್ಠೆ ಯಿಂದ ನಿರ್ವಹಿಸೋಣ ಎಂದು ಅಮ್ಮನಪುರ ಮಹೇಶ್ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನೌಕರ ಸಂಘದ ನಿರ್ದೇಶಕರಾದ ಯದುಗಿರಿ , ಕೊಳಂದ ವೇಲ್, ಕೀರ್ತಿ ಪ್ರಸಾದ್ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಜರಿದ್ದರು.
