ಯಾದಗಿರಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ,ಪ್ರಿಯಾಂಕ ವಾದ್ರಾ ಬಂಧಿಸಿ ಧಮನಕಾರಿ ನೀತಿ ಅನುಸರಿಸಲಾಗಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.
ನಮ್ಮ ನಾಯಕರು ಸೇರಿದಂತೆ ಹಲವರನ್ನು ಬಂಧನ ಮಾಡಿದ್ದು, ಇದು ಪ್ರಜಾ ಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಿಡಿಕಾರಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೋರಾಟ ಮಾಡುವವರನ್ನು ಬಂಧನ ಮಾಡಿದ್ದು ಕೇಂದ್ರ ಸರ್ಕಾರದ ಹತಾಶೆ ಭಾವನೆ ತೊರಿಸುತ್ತದೆ,
ದೇಶದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗಿದೆ ಎಂದು ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪರಿಣಾಮ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ,ಆ ಅಮಾಯಕರ ಸಾವಿಗೆ ಬೆಲೆ ಇಲ್ಲವೆ ಎಂದು ಖಾರವಾಗಿ ಪ್ರಶ್ನಿಸಿದರು.
ಲಕ್ಷಾಂತರ ಯುವಕರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೋರಾಟ ಮಾಡಿದ್ದಾರೆ,ದೇಶದಲ್ಲಿ ಸಂವಿಧಾನಕ್ಕೆ ಯಾವುದೇ ಬೆಲೆ ಇಲ್ಲದಂತಾಗಿದೆ ಎಂದು ಬೇಸರ ಪಟ್ಟರು.
ಪ್ರಧಾನಿ ಮೋದಿ ಅವರು ವಿಶ್ವಗುರು ಅನಿಸಿಕೊಂಡಿದ್ದಾರೆ,ಸೂಕ್ಷ್ಮತೆ ಅರಿತು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕಿತ್ತು, ದೇಶಾದ್ಯಂತ ಪರಿಣಿತರನ್ನು ಕರೆಸಿ ವಿದ್ಯಾರ್ಥಿಗಳ ಜೊತೆ ಮಾತನಾಡಬೇಕಿತ್ತು,
ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ಅವರ ಪರ ನಿಲ್ಲಬೇಕಿತ್ತು ಎಂದು ಎಂ.ಬಿ.ಪಾಟೀಲ್ ಹೇಳಿದರು.
ಮೋದಿ ಅವರು ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸಿಲ್ಲ, ಅವರಿಗೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ನಡೆಯುವ ಸಿಇಟಿ ಪರೀಕ್ಷೆಯು ಮಾದರಿಯಾಗಿದೆ,
ಈಗ ಎಐಕ ಕಾಲ,ತಂತ್ರಜ್ಞಾನ ಮುಂದಿದೆ ಪರೀಕ್ಷೆಯಲ್ಲಿ ಸುಧಾರಣೆ ತರಬೇಕಿತ್ತು ಎಂದು ಹೇಳಿದರು.
ಮೋದಿ ಅವರು ಅಧಿಕಾರಕ್ಕೆ ಬಂದು 14 ವರ್ಷ ಆಗಿದೆ,ಅಚ್ಛೆ ದೀನ್ ಆಯೇಂಗೆ ಅಂದಿದ್ದರು,ದೇಶಕ್ಕೆ ಏನು ಒಳ್ಳೆಯ ದಿನ ಬಂದಿತು?ಗ್ಯಾಸ್,ಪೆಟ್ರೋಲ್ ದರ ಏರಿಕೆಯಾಗಿದೆ,ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದಿದ್ದರು ಆದರೆ ಉದ್ಯೋಗ ನೀಡಲಿಲ್ಲ,ಅತ್ತಾ ನೋಟ್ ಬ್ಯಾನ್ ಮಾಡಿದರು,ಇದರಿಂದ ಅನೇಕರು ಪ್ರಾಣ ಕಳೆದುಕೊಂಡರು ಎಂದು ಸಚಿವರು ಟೀಕಿಸಿದರು.
