ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರುಗಳ ಅಪಘಾತ:ದಂಪತಿ ದುರ್ಮರಣ

ಮಂಡ್ಯ: ಜಿಲ್ಲೆಯ ಮದ್ದೂರಿನ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದಾರೆ.

ಮಾಗಡಿ ತಾಲೂಕು ಬೈರನಹಳ್ಳಿ ವಾಸಿಗಳಾದ ಪಾರ್ವತಿ(30) ಹಾಗೂ ಆಕೆಯ ಪತಿ
ಬಸವರಾಜು (35) ಮೃತ‌ ದುರ್ದೈವಿಗಳು.

ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗನ ದೊಡ್ಡಿ ಗೇಟ್ ಬಳಿ
ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿದೆ

ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸ್ಕೋಡಾ ಕಾರು ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇಟಿಯಾಸ್ ಮತ್ತು ಇನ್ನೋವಾ ಕಾರುಗಳಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರುಗಳು ಜಕಂಗೊಂಡಿವೆ.

ಅಪಘಾತದ ತೀವ್ರತೆಗೆ ಹಲವರು ಗಾಯಗೊಂಡಿದ್ದು, ಚಾಮುಂಡೇಶ್ವರಿ ಆಸ್ಪತ್ರೆ ಮತ್ತು ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ 4 ಕಿಲೋಮೀಟರ್ ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿತ್ತು, ಸ್ಥಳಕ್ಕೆ ಮದ್ದೂರು ಸಂಚಾರ ಪೊಲೀಸರು ಆಗಮಿಸಿ ಟ್ರಾಫಿಕ್ ಜಾಮ್ ಸರಿಪಡಿಸಿ ಮುಂದಿನ ಕ್ರಮ‌ ಕೈಗೊಂಡಿದ್ದಾರೆ.