ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ರಮೇಶ್(35) ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ಟೆಬಲ್.
ಅವರು ಮದ್ದೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಕರ್ತವ್ಯ ನಿರತರಾಗಿದ್ದ ಅವಧಿಯಲ್ಲೇ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಂದು ತಡರಾತ್ರಿ ಬೆಳಕಿಗೆ ಬಂದಿದೆ.
ಮೃತ ರಮೇಶ್ ಪತ್ನಿ ಪುಷ್ಪಲತಾ ಪೊಲೀಸರಿಗೆ ದೂರು ನೀಡಿದ್ದು, ರಮೇಶ್ ಸಾವಿಗೆ ಸಹೊದ್ಯೋಗಿಯಾದ ಕಾನ್ಸ್ಟೇಬಲ್ ಮಹೇಶ್ ಎಂಬುವವರು ಕಾರಣ ಎಂದು ಆರೋಪಿಸಿದ್ದಾರೆ.
