ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುಣ್ಯ ಸ್ನಾನ ಮಾಡಿದ್ದಾರೆ.
ಬೆಳಗ್ಗೆ 11.30 ರ ಸುಮಾರಿಗೆ ಬೋಟ್ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ್ ಘಾಟ್‌ಗೆ ಮೋದಿ ಆಗಮಿಸಿದರು.

ರುದ್ರಾಕ್ಷಿ ಮಾಲೆ ಧರಿಸಿದ್ದ ಮೋದಿ ಕೇಸರಿ ಹಾಗೂ ಕಡುನೀಲಿ ವಸ್ತ್ರ ತೊಟ್ಟು ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ಜಪ ಮಾಡಿ ನಮಿಸಿದ್ದಾರೆ.
ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ ದಿನದಂದು ಪ್ರಧಾನಿಗಳು ಪುಣ್ಯಸ್ನಾನ ಮಾಡಿದ್ದಾರೆ. ನಂತರ ಅಲ್ಲಿ ಸೇರಿದ್ದ ಸಂತರೊಂದಿಗೆ ಚರ್ಚಿಸಿದರು.