ಹುಣಸೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಮಹದೇವಮ್ಮ ಕಟ್ಟೆಮಲಳವಾಡಿ ಅವರು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಅಭಿನಂದಿಸಿದರು.
ಹುಣಸೂರಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಕಾಳನಾಯ್ಕ ಅವರನ್ನು ಅಭಿನಂದಿಸಿದ ಮಹದೇವಮ್ಮ ಮಾತನಾಡಿ, ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ತಾವು ಖುದ್ದು ಭೇಟಿ ನೀಡಿ ಶಾಲೆಯ ಕುಂದು ಕೊರತೆ, ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಆಯಾಯ ಶಾಲೆಗಳಲ್ಲಿಯೇ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ತಾಲೂಕಿನ ಪ್ರತಿಯೊಂದು ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವು ಎಲ್ಲಾ ವಿದ್ಯಾರ್ಥಿಗೂ ಸಿಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಲ್ಲಿ ತಾವು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರಕ್ಷಾ ಸಮಿತಿ ಸದಸ್ಯರಾದ ನೇತ್ರಾವತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ರೇವಣ್ಣ, ಕೇಶವಮೂರ್ತಿ, ಜಯಪ್ರಕಾಶ್ ಹಾಗೂ ಶಿಕ್ಷಕರು ಹಾಜರಿದ್ದರು.
