ಯಳಂದೂರು: ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ 80 ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ಡಾ ನಂಜುಂಡಯ್ಯ
ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು,
ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು ಶಿಕ್ಷಕಿಯರು ಶಾಲಾ ಮಕ್ಕಳು ಅಡುಗೆ ಸಿಬ್ಬಂದಿ ಹಾಜರಿದ್ದರು.
