ಮೈಸೂರು: ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ವಿವಿಧ ಸಂಘಟನೆಗಳ ಮುಖಂಡರು ಭೇಟಿ ಮಾಡಿ ಸ್ವಾಗತಿಸಿ ಅಭಿನಂದಿಸಿದರು.
ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ, ಕರ್ನಾಟಕ ಯುವ ಸೇನೆ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮಹೇಶ್ ನಾಯಕ್, ಉಪಾಧ್ಯಕ್ಷ ಭರತ್, ಯುವ ಹೋರಾಟಗಾರ ನಾಗರಾಜ್ ನಾಯಕ್ ಅವರುಗಳು ನೂತನ ಪೋಲಿಸ್ ಅಧೀಕ್ಷಕ ರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡಿ ಸ್ವಾಗತಿಸಿ ಅಭಿನಂದಿಸಿದರು
