ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕತ್ವವು ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಮಾಲವಿಕಾ ಗುಬ್ಬಿವಾಣಿ ನೇಮಕ ಮಾಡಿದೆ.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಕುಮಾರ್ ಗುಪ್ತ ಅವರು ಹೊರಡಿಸಿರುವ ಅಧಿಕೃತ ಆದೇಶದ ಮೂಲಕ ಈ ನೇಮಕವನ್ನು ಘೋಷಿಸಿದ್ದಾರೆ. ದೇಶದ ವಿವಿಧ ರಾಜ್ಯಗಳಿಗೆ ಸಾಮಾಜಿಕ ಜಾಲತಾಣ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕದ ಜವಾಬ್ದಾರಿಯನ್ನು ಮಾಲವಿಕಾ ಗುಬ್ಬಿವಾಣಿ ಅವರಿಗೆ ವಹಿಸಲಾಗಿದೆ.
ಸಾಮಾಜಿಕ ಜಾಲತಾಣಗಳು ಇಂದು ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸುವ ಹಾಗೂ ಪಕ್ಷದ ವಿಚಾರಧಾರೆ, ಜನಪರ ಹೋರಾಟಗಳು ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಪ್ರಮುಖ ವೇದಿಕೆಯಾಗಿವೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷದ ಸಾಮಾಜಿಕ ಜಾಲತಾಣ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಘಟಿಸಿ, ಪಕ್ಷದ ಧ್ವನಿಯನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸುವ ಮಹತ್ವದ ಜವಾಬ್ದಾರಿ ಮಾಲವಿಕಾ ಗುಬ್ಬಿವಾಣಿ ಅವರ ಮೇಲಿದೆ.
ಅವರ ಸಾಮರ್ಥ್ಯ, ಬದ್ಧತೆ ಮತ್ತು ಸಂಘಟನಾ ಕೌಶಲ್ಯವನ್ನು ಪರಿಗಣಿಸಿ ರಾಷ್ಟ್ರೀಯ ನಾಯಕತ್ವ ಈ ಮಹತ್ವದ ಜವಾಬ್ದಾರಿಯನ್ನು ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಮಾಲವಿಕಾ ಗುಬ್ಬಿವಾಣಿ ಅವರಿಗೆ ನೂತನ ಜವಾಬ್ದಾರಿಗೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕದ ವತಿಯಿಂದ ಹಾಗೂ ರಾಜ್ಯದ ಅನೇಕ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ.
