ಮೈಸೂರು: ಗೌಜಲ ಹಕ್ಕಿಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ತಾಲೋಕು ಹಂಚ್ಯಾ ರಸ್ತೆ ರಮ್ಮನಹಳ್ಳಿ ವಾಸಿ ಶಿವಣ್ಣ(50) ಬಂಧಿತ ಆರೋಪಿ.
ಖಚಿತ ಮಾಹಿತಿ ಆಧರಿಸಿ,ಮೈಸೂರು ಮಹದೇವಪುರ ರಸ್ತೆ, ರಮ್ಮನಹಳ್ಳಿ ಆಟದ ಮೈದಾನದ ಬಳಿ 2 ಗೌಜಲ ಹಕ್ಕಿಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ,
ಆ ವ್ಯಕ್ತಿ 11 ಪಂಜರವನ್ನು ಇಟ್ಟುಕೊಂಡು 2 ಗೌಜಲ ಹಕ್ಕಿಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ. ತಕ್ಷಣ ದಾಳಿ ಮಾಡಿ ಆತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಆರೋಪಿಯಿಂದ ಗೌಜಲ ಹಕ್ಕಿಗಳು ಹಾಗೂ ಪಂಜರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಮಹಾನಿರೀಕ್ಷಕರು ಸಿ.ಐ.ಡಿ. ಅರಣ್ಯ ಘಟಕ, ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಪವನ್ ನಟ್ಟೂರು ಮಾರ್ಗದರ್ಶನದಲ್ಲಿ ಮೈಸೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸು ಉಪನಿರೀಕ್ಷಕರಾದ ಕಿರಣ್ ಕುಮರ್ ಪಿ ಹಾಗೂ ಸಿಬ್ಬಂದಿಗಳಾದ ವೆಂಕಟೇಶ್ ರಾಮಕೃಷ್ಣ ಯತೀಶ್ ಕುಮಾರ್ ಶಶಿಧರ್ ಮತ್ತು ಅರುಣ್ ರವರು ಪಾಲ್ಗೊಂಡಿದ್ದರು.
ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಮಾಹಿತಿಯನ್ನು ನೀಡಬೇಕೆಂದು ಅಧಿಕಾರಿಗಳು ಕೋರಿದ್ದಾರೆ.
ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿ ಫೋನ್ ನಂ:9480800220
ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಮೈಸೂರು ಕಚೇರಿ ಫೋನ್ ನಂ: 9741209859 ಸಂಪರ್ಕಿಸಬಹುದು.
