ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆ: ಪೋಸ್ಟರ್ ಬಿಡುಗಡೆ ಮಾಡಿದ ಯದುವೀರ್

Spread the love

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಯ ಪೋಸ್ಟರನ್ನು ಮಹಾರಾಜರೂ ಹಾಗೂ ಸಂಸದರಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ನಗರದ ಬಿಜೆಪಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ವೇಳೆ ಸ್ಪರ್ಧೆ ಬಗ್ಗೆ ಮಾಹಿತಿ ನೀಡಿದ ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯಲ್ಲಿ ಭಾಗವಹಿಸುವವರು 200 ರೂ ನೋಂದಣಿ ಶುಲ್ಕ ಕಟ್ಟಬೇಕಿದೆ ಎಂದು ‌ಹೇಳಿದರು.

ಸ್ಪರ್ಧೆಯಲ್ಲಿ ನಾಡಿನ ಸಂಸ್ಕೃತಿ, ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿದ 10 ವಿಜೇತರಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ ಬಹುಮಾನ ಹಾಗೂ ಪ್ರಮಾಣಪತ್ರನೀಡಲಾಗುವುದು, ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ತಿಳಿಸಿದರು.

ಕಡೆಯ ದಿನ ಅಕ್ಟೋಬರ್ 2. 8971389539ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3 ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಎಂದು ಹೇಳಿದರು.

ಆನಂತರ ನುರಿತ ತೀರ್ಪುಗಾರರು ಸ್ಪರ್ಧಾಳುಗಳ ನಿವಾಸಕ್ಕೆ ತೆರಳಿ ಗೊಂಬೆ ಜೋಡಣೆ ವೀಕ್ಷಿಸಿ ಸಂಸ್ಕೃತಿ, ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಟಿ. ಎಸ್ ಶ್ರೀವತ್ಸ, ಮಾಜಿ ಮಹಾಪೌರರಾದ ಶಿವಕುಮಾರ್, ಮುಖಂಡರಾದ ಮಹೇಶ್ ರಾಜ ಅರಸ್,ಕಾರ್ತಿಕ್ ಮರಿಯಪ್ಪ,ಪರಿಕ್ಷಿತ್ ರಾಜ್ ಮತ್ತಿತರರು ಹಾಜರಿದ್ದರು.