ಮೈಸೂರು: ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸರ್ಕಾರ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಭವನದಲ್ಲಿ
ನಡೆದ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಿಗೆ ಪತ್ರ ವಿತರಣಾ ಸಮಾರಂಭದ ವೇಳೆ ವಿಕ್ರಂ ಅಯ್ಯಂಗಾರ್ ಅವರಿಗೆ ಮೈಸೂರು ಜಿಲ್ಲೆಯ ಮನೆಗೊಂದು ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಾಗಿ ಅರ್ಹತಾ ಪತ್ರ ನೀಡಲಾಯಿತು.
ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ. ಮಾನಸ ಅವರು ವಿಕ್ರಂ ಅಯ್ಯಂಗಾರ್ ಅವರಿಗೆ ಅರ್ಹತಾ ಪತ್ರ ನೀಡಿ
ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹೆಸರಾಂತ ಹಿರಿಯ ಕವಿಗಳಾದ ಡಾ ಸಿ ಪಿ ಕೃಷ್ಣಕುಮಾರ್,
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ ದೀಪಕ್, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕರಿಯಪ್ಪ, ಮೈಸೂರಿನ ಸಂಚಾಲಕರಾದ ಚಂದ್ರಶೇಖರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ ಮತ್ತಿತರರು ಹಾಜರಿದ್ದರು.