ಮೈಸೂರು: ಮಾಜಿ ಪ್ರಧಾನಿ ಡಾಕ್ಟರ್ ಮನಮೋಹನ್ ಸಿಂಗ್ ಅವರು ಒಬ್ಬ ಶೇಷ್ಠ ಹಾಗೂ ಅನುಭವಿ ಆರ್ಥಿಕ ತಜ್ಞರಾಗಿದ್ದರು ಎಂದು ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ ಬಣ್ಣಿಸಿದರು.

ಮೈಸೂರಿನ ಚಾಮರಾಜಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮಾಜಿ ಪ್ರಧಾನ ಮಂತ್ರಿ ಡಾಕ್ಟರ್ ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಂತಾಪ ಸಲ್ಲಿಸಿ ಮಾತನಾಡಿದರು.
ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ಹಣಕಾಸು ಸಚಿವರಾಗಿ ಇದೆಲ್ಲಕ್ಕೂ ಮಿಗಿಲಾಗಿ ದೇಶದ ನೆಚ್ಚಿನ ಪ್ರಧಾನಿಯಾಗಿ ಅವರು ಸಲ್ಲಿಸಿದ ಸೇವೆ ಅಪೂರ್ವ ಹಾಗೂ ಅನುಪಮ ಎಂದು ತಿಳಿಸಿದರು.
ದೇಶದ ಅರ್ಥ ವ್ಯವಸ್ಥೆಗೆ ಭದ್ರ ಬುನಾದಿ ಒದಗಿಸಿದ ಶ್ರೇಯಸ್ಸು ಡಾಕ್ಟರ್ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಬಸವರಾಜ್ ಬಸಪ್ಪ ಹೇಳಿದರು.
ಈ ಸಂತಾಪ ಸಭೆಯಲ್ಲಿ ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಜಿ ರಾಘವೇಂದ್ರ,
ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆಲನಹಳ್ಳಿ ಎಂ ಎನ್ ಚೇತನ್ ಗೌಡ,
ಎಸ್ ಎನ್ ರಾಜೇಶ್, ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷರಾದ ಚೇತನ್ ಕಾಂತರಾಜು, ವಿನಯ್ ಕಣಗಾಲ್, ರಾಕೇಶ್, ಚಕ್ರಪಾಣಿ, ಸಚಿಂದ್ರ, ಮಹಾನ್ ಶ್ರೇಯಸ್, ಹರೀಶ್ ನಾಯ್ಡು ಮತ್ತಿತರರು ಹಾಜರಿದ್ದು ಮನಮೋಹನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.