ರಾಯಚೂರು: ಬೊಲೆರೊ ವಾಹನ ಮತ್ತು ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಎಂಟು ಮಂದಿ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ಮೂಲದ 21 ಭಕ್ತರು ಬೊಲೆರೋ ವಾಹನದ ಮೂಲಕ ರಾಯರ ದರ್ಶನಕ್ಕೆ ಬರುತ್ತಿದ್ದರು. ಮಾರ್ಗ ಮಧ್ಯೆ ಬೊಲೆರೋ ವಾಹನಕ್ಕೆ ಸಿಮೆಂಟ್, ಜಲ್ಲಿಕಲ್ಲು ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ಚಿಕ್ಕಮಗಳೂರು ಮೂಲದ ಅಮೃತ, ತೇಜಸ್ವಿನಿ, ಧನ್ಯ, ದೀಪಿಕ, ದೀಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತಪಟ್ಟವರೆಂದು ಗುರುತಿಸಲಾಗಿದೆ.
13 ಮಂದಿ ಗಾಯಗೊಂಡಿದ್ದು ಎಮಿಗನೂರು ಹಾಗೂ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಳಲಿಸಲಾಗಿದೆ.
ಗುರುವಾರ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ನಜ್ಜುಗುಜ್ಜಾಗಿದೆ ಅದರೊಳಗಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಮುಂದಾದರು.
