ಮೈಸೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಮಾ.14 ರಂದು ಬೆಳಿಗ್ಗೆ 11:30ಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾರತೀಯ ವೀರ ಹುತಾತ್ಮ ಯೋಧರ ತಾಯಂದಿರು ಮತ್ತು ಮಡದಿಯರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ಅಧ್ಯಕ್ಷರಾದ ವಿ.ಪಿ ಸುಶೀಲ ಅವರು, ಕಾರ್ಯಕ್ರಮವನ್ನು ಮೈಸೂರಿನ ಪುರಭವನದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧುರಿ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ಯನ್ನು ಸಮಿತಿಯ ಅಧ್ಯಕ್ಷರಾದ ವಿ ಪಿ ಸುಶೀಲ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಮೂಡ ಮಾಜಿ ಅಧ್ಯಕ್ಷ ರಾಜೀವ್ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸನ್ಮಾನಿತರಿಗೆ ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷರಾದ ವಾಣಿ ಕೆ.
ಶಿವರಾಮ್ ಅವರು ನೆನಪಿನ ಕಾಣಿಕೆ ವಿತರಿಸುವರು.ಅಲ್ಲದೆ ಅನೇಕ
ವಿಶೇಷ ಆಹ್ವಾನಿತರು ಪಾಲ್ಗೊಳ್ಳುವರು ಎಂದು ಸುಶೀಲಾ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪುಟ್ಟರಾಜು, ಉಪಾಧ್ಯಕ್ಷರಾದ ಅಮೀನಾ ಬೇಗಮ್, ವೈ ಬಿ ಈಶ್ವರ್, ಪರಮೇಶ್ ಉ ಸಿದ್ದಪ್ಪ, ಮೈಸೂರು ಜಿಲ್ಲಾಧ್ಯಕ್ಷ ಸುದರ್ಶನ್, ಎನ್ ಕೆ., ಸಂಘಟನಾ ಕಾರ್ಯದರ್ಶಿ ಪಾರ್ವತಿ ಹೆಚ್.ಟಿ ಮತ್ತಿತರರು ಉಪಸ್ಥಿತರಿದ್ದರು.
