ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ

Spread the love

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ‌ ನಗರದ ಹಳೆ ಕೆಸರೆಯಲ್ಲಿ ನಡೆದಿದೆ.

ಹಳೆ ಕೆಸೆರೆಯ ಕೋಮಲ (25)ಆತ್ಮಹತ್ಯೆ ಮಾಡಿಕೊಂಡ ಯುವತಿ

ಕೋಮಲ ಹಾಗೂ ರಾಜು ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.ಭಾನುವಾರ ತಡ ರಾತ್ರಿ ಗಂಡ ಹೆಂಡತಿ ನಡುವೆ ಗಲಾಟೆ ನಡೆದಿದ್ದು ಇದರಿಂದ ಮನನೊಂದು ಕೋಮಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಂಪತಿ 8 ತಿಂಗಳ ಹಿಂದೆ ಹಳೆ ಕೆಸರೆಯಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಿದ್ದರು. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದಂತಾಗಿದೆ.

ಸ್ಥಳಕ್ಕೆ ಎನ್ ಆರ್. ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.