ಮೈಸೂರು: ಮೈಸೂರಿನ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಬುದುವಾರ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಉಚಿತ ಸಾಮೂಹಿಕ ಉಪನಯನ ಬ್ರಹ್ಮೋಪದೇಶ ನೆರವೇರಿಸಲಾಯಿತು.
ನಂತರ ವಟುಗಳಿಂದ ಶೋಭಾ ಯಾತ್ರೆ ಮತ್ತು ಅಶ್ವತ್ಥ ಪೂಜೆ ನೆರೆವೇರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷರಾದ ಪಿ ಎಸ್ ರಮೇಶ್, ಶ್ರೀವತ್ಸ ರಾವ್, ರಾಘವೇಂದ್ರ ಪ್ರಸಾದ್, ಶ್ರೀ ಕೃಷ್ಣ ಮಿತ್ರ ಮಂಡಳಿ ಉಪಾಧ್ಯಕ್ಷ ಪ್ರವೀಣ್ , ಶ್ರೀ ಕೃಷ್ಣ ಟ್ರಸ್ಟ್ ಕಾರ್ಯದರ್ಶಿ ಕೆ ವಿ ಶ್ರೀಧರ್, ಮತ್ತಿತರರು ಉಪಸ್ಥಿತರಿದ್ದರು.
