ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಯಶಸ್ವಿ ಹಿನ್ನಲೆ, ಮೇ 20 ರಂದು ಗ್ಯಾರಂಟಿ ಯೋಜನೆಗಳ ಬಿಂಬಿಸುವ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರದಿಂದಲೇ ವಿಜಯಪುರ ಜಿಲ್ಲೆ ಹೊಸಪೇಟೆಯಲ್ಲಿ ಮೇ.20 ರಂದು ಸಾಧನಾ ಸಮಾವೇಶ ನಡೆಯಲಿದೆ. ರಾಜ್ಯಾದ್ಯಂತ ಈ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ಮೈಸೂರು ವ್ಯಾಪ್ತಿಗೆ ಬರುವ ಎಂಟು ಜಿಲ್ಲೆಗಳ ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಸಮಾವೇಶಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಪ್ರಗತಿ ಪಥದಲ್ಲಿ ಸಾಗುತ್ತಿದೆ, ಇದಕ್ಕೆ ಮೂಲ ಕಾರಣ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಲ್ಲಿ ಕೊಟ್ಯಂತರ ಜನಪರ ಕಾರ್ಯಕ್ರಮಗಳು ಅಪಾರ ಯಶಸ್ಸನ್ನು ಗಳಿಸಿವೆ ಎಂದು ಡಾ.ಪುಷ್ಪಾ ಅಮರನಾಥ್ ತಿಳಿಸಿದರು.
ನಮ್ಮ ಸರ್ಕಾರ ಮಾಡಿದ ಉತ್ತಮ ಕೆಲಸವನ್ನ ಜನರಿಗೆ ತಿಳಿಸುವ ಸದುದ್ದೇಶದಿಂದ ಸಾಧನ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.