(ವರದಿ:ಸಿದ್ದರಾಜು ಕೊಳ್ಳೇಗಾಲ)
ಕೊಳ್ಳೇಗಾಲ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದು,ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.
ಶಿವನಸಮುದ್ರಕ್ಕೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ನಾಲ್ವರು ಈಜಾಡಲು ನದಿಗೆ ಇಳಿದಿದ್ದಾರೆ.
ಈ ವೇಳೆ ಈಜಲಾಗದೆ ಪರದಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಅರುಣ್ ಕುಮಾರ್ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ನದಿಯಲ್ಲಿ ಈಜಲಾಗದೆ ಪರದಾಡುತ್ತಿದ್ದ ಪ್ರಮೋದ್ (23) ಪ್ರಫುಲ್ಲ (22) ತುಷಾರಾ (20) ಎಂಬ ವಿದ್ಯಾರ್ಥಿಗಳನ್ನು ಹಗ್ಗದ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.
ಮತ್ತೊಬ್ಬ ವಿದ್ಯಾರ್ಥಿ ನಂದ ಕುಮಾರ್ ಎಂಬಾತ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.