ಹಾಲಿನ ದರ ಹೆಚ್ಚಳ ಮಾಡಿದರೆ ಪೂರ್ಣವಾಗಿ ರೈತರಿಗೇ‌ ವರ್ಗಾವಣೆ:ಸಿಎಂ

Spread the love

ಕೊಪ್ಪಳ: ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳದ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಹಾಲಿನ ದರ‌ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆ ಬಂದಿದೆ,ಇನ್ನೂ ಈ ಬಗ್ಗೆ ‌ನಿರ್ಧಾರ ಮಾಡಿಲ್ಲ,ಒಂದು‌ ವೇಳೆ ದರ ಹೆಚ್ವಳ ಮಾಡಿದರೆ ಅದನ್ನೆಲ್ಲ ಪೂರ್ಣವಾಗಿ ರೈತರಿಗೇ ಕೊಡಲಾಗುವುದು ಎಂದು ಸ್ಪಷ್ಟವಾಗಿ ಹೇಳಿದರು.

50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು,70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ,ಈಗಾಗಲೇ ತಜ್ಞರ ಸಮಿತಿ ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದು ತಿಳಿಸಿದರು.

ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು ಎಂದು ಹೇಳಿದರು.

ತುಂಗಭದ್ರ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ ಎಂದು ಸಿಎಂ ತಿಳಿಸಿದರು.

ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ದುರಸ್ತಿ ಗೆ ಕ್ರಮ ವಹಿಸಿದರು ಎಂದು ಮೆಚ್ಚುಗೆ‌ ವ್ಯಕ್ತಪಡಿಸಿದರು.

ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್ ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು ಎಂದು ‌ಸಿದ್ದರಾಮಯ್ಯ ಈ ವೇಳೆ ಶ್ಲಾಘಿಸಿದರು.

ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜಭವನದಿಂದ ಮಾಹಿತಿ ಸೋರಿಕೆಯಾಗಿದೆ ಎಂಬ ಬಗ್ಗೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ರಾಜ್ಯಪಾಲರ ಕಛೇರಿಯಿಂದಲೇ ಸೋರಿಕೆಯಾಗಿರಬಹುದು ಈ ಬಗ್ಗೆ ತನಿಖೆಯಾಗಲಿ ಎಂದು ಸಿದ್ದು ಹೇಳಿದರು.