ನಗರಾಭಿವೃದ್ಧಿ ಸಚಿವರ ಹುಟ್ಟುಹಬ್ಬ ಆಚರಣೆ

Spread the love

ಮೈಸೂರು: ನಗರಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಾದ ಭೈರತಿ ಸುರೇಶ್ ಅವರ ಹುಟ್ಟು ಹಬ್ಬವನ್ನು ನಗರದಲ್ಲಿ ವಿಶೇಷವಾಗಿ ಆಚರಿಸಲಾಯಿತು.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ನೇತೃತ್ವದಲ್ಲಿ ಸಚಿವ ಬೈರತಿ ಸುರೇಶ್ ಅವರಿಗೆ ಅವರದೇ ವಿಶೇಷ ಭಾವಚಿತ್ರ ನೀಡಿ ಸನ್ಮಾನಿಸಿ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಇಲವಾಲ ಗ್ರಾಮ ಪಂಚಾಯತ್ ಸದಸ್ಯರಾದ ಕರೀಗೌಡ, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್,ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಹಿಂದುಳಿದ ವರ್ಗದ ಕಾಂಗ್ರೆಸ್ ಉಪಾಧ್ಯಕ್ಷ ರಮೇಶ ರಾಮಪ್ಪ ಮತ್ತು 23ನೇ ವಾರ್ಡಿನ ಮುಖಂಡರಾದ ರವಿಚಂದ್ರ ಹಾಜರಿದ್ದರು.