ಬೆಂಗಳೂರು: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ರಾಜ್ಯ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರು ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕಿನ ತೊಂದರೆಯಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ.
ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದರು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.ಅವರಿಗೆ 66 ವರ್ಷ ವಯಸ್ಸಾಗಿತ್ತು.
ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವರು, ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3.15ರ ವೇಳೆ ಮೃತಪಟ್ಡಿದ್ದಾರೆ.
ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ಶಸ್ತ್ರಚಿಕಿತ್ಸೆ ಕೂಡಾ ಆಗಿತ್ತು.ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತಾ ಹೋಯಿತು.
ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗಿತ್ತು.ಆದರೂ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ.
ಸಚಿವ ಸುಧಾಕರ್ ನಿಧನಕ್ಕೆ ವಿವಿಧ ಗಣ್ಯರು ರಾಜಕೀಯ ನಾಯಕರು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.
ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಿದ್ಧತೆ ಮಾಡಲಾಗಿದ್ದು,
ಸಾರ್ವಜನಿಕರು ಮತ್ತು ಅಭಿಮಾನಿಗಳು ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
