ಬೆಂಗಳೂರು: ಸಹಕಾರ ಸಚಿವ ಕೆ. ಎನ್ ರಾಜಣ್ಣ ಅವರು ರಾಜೀನಾಮೆ ನೀಡಿದ್ದು ರಾಜಕೀಯ ವಲಯದಲ್ಲಿ ಸಂಚಲನ ಉಂಟುಮಾಡಿದೆ.
ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆ.ಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜಣ್ಣ ಅವರ ರಾಜೀನಾಮೆಯನ್ನು ಸಿಎಂ ಅಂಗೀಕರಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮಗಳೊಂದಿಗೆ
ರಾಜೀನಾಮೆ ಬಗ್ಗೆ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ರಾಜಣ್ಣ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ ಎಂದು ರಾಜಣ್ಣ ಪ್ರಶ್ನಿಸಿದ್ದರು. ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್‌ಗೆ ಮುಜುಗರ ತಂದಿತ್ತು. ಈ ಹೇಳಿಕೆಯ ನಂತರ ಹೈಕಮಾಂಡ್ ರಾಜಣ್ಣ ಅವರಿಗೆ ರಾಜೀನಾಮೆ ಸಲ್ಲಿಸಲು ಸೂಚನೆ ನೀಡಿತ್ತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಿಎಂಗೆ ಕರೆ ಮಾಡಿ ರಾಜೀನಾಮೆ ಪಡೆಯುವಂತೆ ಸೂಚನೆ ನೀಡಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.