ಮೈಸೂರು: ಎಲ್ಲರ ವಿಕಾಸಕ್ಕಾಗಿ ನಿಸ್ವಾರ್ಥದಿಂದ 11 ವರ್ಷ ಕೆಲಸ ಮಾಡಿರುವ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದು
ವಿರೋಧ ಪಕ್ಷದ ನಾಯಕರ ಆರ್ ಅಶೋಕ್ ಹೇಳಿದರು.
ಈ 11 ವರ್ಷಗಳ ಸಾಧನೆಯನ್ನು ಸುವರ್ಣ ಅಕ್ಷರದಲ್ಲಿ ಬರೆದಿಡುವಂತದು ಎಂದು ಅಶೋಕ್ ಹೇಳಿದರು.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 11 ವರ್ಷಗಳ ಅಭಿವೃದ್ಧಿ ಕುರಿತು ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆಳ ಹಂತದ ಜನರಿಗೆ ಯೋಜನೆಗಳನ್ನು ತಲುಪಿಸುವ ಕಾರ್ಯಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು
ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ನರೇಂದ್ರ ಮೋದಿಯವರು ದೇಶದ 140 ಕೋಟಿ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ಆಹಾರ, ಆರೋಗ್ಯ, ಮಹಿಳೆಯರ ಸಬಲೀಕರಣ ಶಿಕ್ಷಣ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ, ವಿಶ್ವದಲ್ಲಿ ಭಾರತೀಯರು ಇಂದು ಹೆಮ್ಮೆಯಿಂದ ನಾವು ಭಾರತೀಯರು ಎಂದು ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದರು.
ಇದು ಮೋದಿಯವರು ಭಾರತವನ್ನು ವಿಶ್ವಗುರು ಮಾಡುವಲ್ಲಿ ನಿರಂತರ ಶ್ರಮಿಸುತ್ತಿರುವುದೇ ಕಾರಣವಾಗಿದೆ, ಜಾಗತಿಕವಾಗಿ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಭಾರತ ಇಂದು ಹೊರಹೊಮ್ಮಿದೆ ಎಂದು ಅಶೋಕ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್,ಬಿಜೆಪಿ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಶಾಸಕ ಶ್ರೀವತ್ಸಾ,ಮಾಜಿ ಸಂಸದ ಪ್ರತಾಪ್ ಸಿಂಹ, ಮೈಸೂರು ನಗರ ಸಂಚಾಲಕರಾದ ಡಾ. ಹೇಮಾ ನಂದೀಶ್, ಪ್ರಧಾನ ಕಾರ್ಯದರ್ಶಿಗಳಾದ ಗಿರಿಧರ್, ಬಿ ಎಮ್ ರಘು, ಕೇಬಲ್ ಮಹೇಶ್, ಅನಿಲ್ ತಾಮಸ್, ಗೋಕುಲ್ ಗೋವರ್ಧನ್, ಸು ಮುರುಳಿ, ನಾಗೇಂದ್ರ ಕುಮಾರ್, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.