ಮೈಸೂರು: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನರೇಂದ್ರ ಮೋದಿ ಅಭಿಮಾನಿ ಬಳಗ ಹಾಗೂ ಅಪೂರ್ವ ಸ್ನೇಹ ಬಳಗದವರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದರು.
ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಹಿನ್ನೆಲೆಯಲ್ಲಿ ಚಾಮುಂಡಿಪುರಂ ನಲ್ಲಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಅಪೂರ್ವ ಸುರೇಶ್ ,ನಗರ ಪಾಲಿಕೆ ಮಾಜಿ ಸದಸ್ಯರಾದ ಜಗದೀಶ್ ,ದೂರ ರಾಜಣ್ಣ,ಕೆ ಎಮ್ ನಿಶಾಂತ್,ಶ್ರೀಕಾಂತ ಕಶ್ಯಪ್, ಶಿವಲಿಂಗ ಸ್ವಾಮಿ, ಆನಂದ್,ರಾಮಚಂದ್ರ ರಾವ್, ಆದರ್ಶ್,ನಿವೃತ್ತ ಶಿಕ್ಷಕ ಮಹದೇವಸ್ವಾಮಿ,
ಪುರುಷೋತ್ತಮ್ ,ಅಮಿತ್ ಮತ್ತಿತರ ಅಭಿಮಾನಿಗಳು ಪಾಲ್ಗೊಂಡಿದ್ದರು.
