ಮೈಸೂರು: ಜಿ ಎಸ್ ಟಿ ಕಡಿತ ಸ್ವಾಗತಿಸಿ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗದವರು ಸಿಹಿ ಅಂಚಿ ಖುಷಿ ಪಟ್ಟರು.
ಈ ವೇಳೆ ಮಾತನಾಡಿದ ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್,
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಜಿ ಎಸ್ ಟಿ ಯಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ದೇಶಕ್ಕೆ ವಾಗ್ದಾನ ನೀಡಿದಂತೆ ಜಿಎಸ್‌ಟಿ ಕಡಿತ ಮಾಡುವ ಮೂಲಕ ದೇಶದ ಜನರಿಗೆ ದಸರಾ ಉಡುಗೊರೆ ನೀಡಿದ್ದಾರೆ ಎಂದು ಹೇಳಿದರು.
ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿಎಸ್‌ಟಿ ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರ್ಕಾರದ ಮಹತ್ವದ ನಿರ್ಣಯವನ್ನು ಸ್ವಾಗತಿಸುತ್ತೇವೆ ಎಂದು ನುಡಿದರು.
ಹೇರ್ ಆಯಿಲ್ ನಿಂದ ಕಾರ್ನ್ ಪ್ಲೇಕ್ಸ್, ಟಿ.ವಿ ಸೆಟ್, ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗೆ ಜನಸಾಮಾನ್ಯರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳು ಕಡಿಮೆ ಆಗಲಿವೆ ಎಂದು ಪ್ರಧಾನಿ ತಿಳಿಸಿದ್ದಾರೆ. ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಮೂಲಕ ಜನಸಾಮಾನ್ಯರ ಸೇವಕ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ಮಾ ವಿ ರಾಮ್ ಪ್ರಸಾದ್ ಹೇಳಿದರು ನಂತರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ದೂರ ರಾಜಣ್ಣ, ಪುರುಷೋತ್ತಮ್, ಆನಂದ್,ನಿವೃತ್ತ ಶಿಕ್ಷಕ ಮಹದೇವಸ್ವಾಮಿ, ಜತ್ತಿ ಪ್ರಸಾದ್, ಸುಚೇಂದ್ರ, ಜೈರಾಮ್, ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.