ಮೋದಿ ನಿರ್ಧಾರಕ್ಕೆ ಎಲ್ಲರೂ ಬೆಂಬಲ ನೀಡಬೇಕು-ಹೆಚ್.ವಿಶ್ವನಾಥ್

ಮೈಸೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ, ಅವರ ನಿರ್ಧಾರಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ವಿಧಾನ ಪರಿಷತ್ ಹೆಚ್.ವಿಶ್ವನಾಥ್ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಲಾಮಿಕ್ ರಾಷ್ಟಗಳು ಜಾಗತಿಕವಾಗಿ ಧರ್ಮಾಧಾರಿತವಾಗಿ ನಡೆದುಕೊಳ್ಳುತ್ತಿವೆ. ನೆರೆಯ ಪಾಕಿಸ್ತಾನ ಕೂಡ ಧರ್ಮಾಧಾರಿತ ದೇಶ. ಅಲ್ಲಿ ಧರ್ಮದ ಆಧಾರದ ಮೇಲೆಯೇ ಆಡಳಿತ ನಡೆಯುತ್ತದೆ. ನಮ್ಮದು ಜಾತ್ಯತೀತ ರಾಷ್ಟ್ರ ಎಂದು ತಿಳಿಸಿದರು.

ಉಗ್ರರ ದಾಳಿ ಕುರಿತು ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಅಪ್ರಸ್ತುತ, ಪ್ರಿಯಾಂಕಾ ಗಾಂಧಿ ಅವರ ಪತಿ ಎಂಬ ಕಾರಣಕ್ಕೆ ವಾದ್ರಾ ಏನೇನೋ ಮಾತನಾಡಬಾರದು ಎಂದು ಸಲಹೆ ನೀಡಿದರು.

ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕು ಎಂದು ವಿಶ್ವನಾಥ್ ಹೇಳಿದರು.