(ವರದಿ. ಎಸ್. ಪುಟ್ಟಸ್ವಾಮಿ ಹೊನ್ನೂರು)
ಯಳಂದೂರು: ಕೊಳ್ಳೇಗಾಲ ಮತ್ತು ಯಳಂದೂರು ಗ್ರಾಮ ಪಂಚಾಯತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಗಳೊಂದಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್
ಅವರು ಸಭೆ ನಡೆಸಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು,ನಿಜವಾದ ಗ್ರಾಮೀಣ ಸಬಲೀಕರಣ ನಮ್ಮ ಗುರಿ. ‘ವಿಬಿ ಜಿ ರಾಮ್ ಜೀ’ ಯೋಜನೆಯಡಿ ಶ್ರಮಿಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸುವಂತೆ ಹಾಗೂ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಅರ್ಹರಿಗೆ ಕಡ್ಡಾಯವಾಗಿ ಉದ್ಯೋಗ ಒದಗಿಸುವಂತೆ
ಸೂಚಿಸಿದರು.
ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಇಲ್ಲದಂತೆ ನೋಡಿಕೊಳ್ಳುವುದು
ಜಲ ಜೀವನ್ ಮಿಷನ್’ ಅಡಿ ಪ್ರತಿ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯ ಖಚಿತಪಡಿಸುವುದು.ವಸತಿ ಯೋಜನೆಗಳ ನ್ಯೂನತೆಗಳನ್ನು ಸರಿಪಡಿಸಿ, ಶೀಘ್ರ ಪ್ರಗತಿ ಸಾಧಿಸುವುದು.ಸೆ. 17 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ‘ಸ್ವಚ್ಛತಾ ಹಿ ಸೇವಾ’ ಆಂದೋಲನದಡಿ ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಒತ್ತು ನೀಡುವುದು,ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು.
ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಆದೇಶಿಸಿದರು.
ಸಭೆಯಲ್ಲಿ ಯಳಂದೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೇಣು, ಕೊಳ್ಳೇಗಾಲ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಸೇರಿದಂತೆ ಎರಡು ತಾಲೂಕುಗಳ ತಾಲೂಕು ಮಟ್ಟದ ಅಧಿಕಾರಿಗಳು , ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
