(ವರದಿ:ಸಿದ್ದರಾಜು, ಕೊಳ್ಳೇಗಾಲ)
ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶವನ್ನು ಪಡೆದು ಮಾದರಿಯಾಗಿದೆ.
ಒಟ್ಟು 50 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು ಅದರಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಮೋನಿಕಾ .ಎಲ್ 612 ಅಂಕಗಳನ್ನು ಪಡೆದು ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಈ ವಿದ್ಯಾರ್ಥಿನಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಚಾಮರಾಜನಗರ ಮತ್ತು ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
