ಭೂತನಾಳ ಕೆರೆಯಲ್ಲಿ 6 ಶವ ಪತ್ತೆ:
5 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಶಂಕೆ
ವಿಜಯಪುರ: ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ತಾಯಿ ಮತ್ತು ಮಕ್ಕಳು ಸೇರಿ ಒಂದೇ ಕುಟುಂಬದ ಆರು ಮಂದಿ ಮೃತದೇಹಗಳು ಬುಧವಾರ ಬೆಳಗ್ಗೆ ಪತ್ತೆಯಾಗಿದ್ದು ತೀವ್ರ ಆತಂಕ ಸೃಷ್ಟಿಯಾಗಿದೆ.
ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಈ ದುರಂತ ಸಂಭವಿಸಿದೆ.
ಶೋಭಾ ಮಲ್ಲಿಕಾರ್ಜುನ ಜಾಲಗೇರಿ (35)ವಿದ್ಯಾ (15)ಸುವರ್ಣ (13)ತಿಪ್ಪರಾಯ (12)ಸಾನಿಕಾ (10)ವಿಕಾಸ್ (6)ಮೃತರೆಂದು ಗುರುತಿಸಲಾಗಿದೆ.
ಆ.23 ರಂದು ರಾತ್ರಿ ಕುಟುಂಬದಲ್ಲಿ ಸಣ್ಣ ಕೌಟುಂಬಿಕ ಕಲಹ ನಡೆದಿತ್ತು. ಇದರಿಂದ ಮನನೊಂದ ಶೋಭಾ ಅವರು ಮಕ್ಕಳೊಂದಿಗೆ ಮನೆಯಿಂದ ಹೊರಹೋಗಿದ್ದರು.
ಆಗಸ್ಟ್ 24 ರಂದು ಶೋಭಾ ಅವರ ಪತಿ ಮಲ್ಲಿಕಾರ್ಜುನ ಜಾಲಗೇರಿ ಅವರು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕಾಲು ಜಾರಿ ಬಿದ್ದಿರುವ ಸಾಧ್ಯತೆಯೂ ಇದೆ ಹಾಗಾಗಿ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
