ಮೈಸೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ ಅವರು ವಾರ್ಡ್ ನಂ. 23ರ ಕುರುಬಗೆರೆ ಅರಳಿಕಟ್ಟೆ ದೇವಸ್ಥಾನದ ಮುಂಭಾಗ ಸ್ಥಳೀಯ ನಿವಾಸಿಗಳಿಗೆ ಉಚಿತವಾಗಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳನ್ನು ವಿತರಿಸಿ ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೌರಿ-ಗಣೇಶ ಹಬ್ಬವು ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಕುಟುಂಬ ಮೌಲ್ಯಗಳನ್ನು ಪ್ರತಿಬಿಂಬಿಸುವ ಹಬ್ಬವಾಗಿದೆ.
ಎಂದು ಹೇಳಿದರು.
ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ಬದಲಾಗಿ ಮಣ್ಣಿನ ಮೂರ್ತಿಗಳನ್ನು ಬಳಸಬೇಕು ಎಂದು ಮನವಿ ಮಾಡಿದರು.
ಮಣ್ಣಿನ ಮೂರ್ತಿಗಳ ಬಳಕೆಯಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯೂ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಆಚರಣೆಗೆ ಮುಂದಾಗಬೇಕು ಎಂದು ಹೇಳಿದರು.
ಗೌರಿ ಗಣೇಶ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಭಕ್ತಿಭಾವವನ್ನು ಬೆಳೆಸುವ ಹಬ್ಬವಾಗಿದ್ದು, ಎಲ್ಲರೂ ಶಾಂತಿ, ಸಡಗರ ಮತ್ತು ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದೇವರಾಜ್
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ
ನಾಗಭೂಷಣ್, ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ, ನವೀನ್, ಲೋಕೇಶ್, ಮಂಗಳಾ ,ಶಾಂತ, ಮಂಜುನಾಥ ,ಜಗದೀಶ್ ,ಹೇಮಂತ್ ,ಹರ್ಷ ,ವಿನಯ್ ಮತ್ತಿತರರು ಹಾಜರಿದ್ದರು.
