ಮುಜರಾಯಿ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಲು ಆಗ್ರಹ

ಮೈಸೂರು: ಚಾಮುಂಡಿ ಬೆಟ್ಟ ಸೇರಿದಂತೆ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ
ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಭಕ್ತಾದಿಗಳಿಂದ ಸಹಿ ಸಂಗ್ರಹಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮೈಸೂರಿನ ಸಿದ್ದಾರ್ಥ ನಗರದಲ್ಲಿ ಚಾಮುಂಡೇಶ್ವರಿ ಭಕ್ತ ವೃಂದದವರು ಭಕ್ತಾದಿಗಳಿಂದ ಸಹಿ ಸಂಗ್ರಹಿಸಿ ಸಾಮಾಜಿಕ ಹೋರಾಟಗಾರ ವಿಕ್ರಮ್ ಅಯ್ಯಂಗಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ತಹಶೀಲ್ದಾರ್ ಶಿವಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಭಕ್ತ ವೃಂದದವರು,ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ದೇಶ ವಿದೇಶ, ರಾಜ್ಯದ ವಿವಿಧ ಕಡೆಯಿಂದ ಕೋಟ್ಯಾಂತರ ಭಕ್ತರು ಆಗಮಿಸುತ್ತಾರೆ, ಮೈಸೂರಿನ ಜಿಲ್ಲಾಡಳಿತ ಸಕಲ ವ್ಯವಸ್ಥೆಯನ್ನ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಹೇಳಿದರು.

ಭಾರತದ ಬಹುತೇಕ ಇತಿಹಾಸ ಪರಂಪರೆಯುಳ್ಳ ದೇವಸ್ಥಾನಗಳಲ್ಲಿ ದರ್ಶನ ಪಾವಿತ್ರತ್ಯತೆ ಭಕ್ತಿಭಾವ ಕಾಪಾಡುವ ನಿಟ್ಟಿನಲ್ಲಿ ವಸ್ತ್ರಸಂಹಿತೆಯನ್ನ ಜಾರಿಗೊಳಿಸಲಾಗಿದೆ.ಹಾಗೆಯೇ ನಮ್ಮ ರಾಜ್ಯದಲ್ಲೂ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯು ರಾಜ್ಯದ 211ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರಸಂಹಿತೆಯನ್ನು ಅನುಷ್ಠಾನಗೊಳಿಸುವ ಚಿಂತನೆ ಮಾಡಿತ್ತು, ಈಗಾಗಲೇ ಕರ್ನಾಟಕದಲ್ಲಿ ಅತಿಹೆಚ್ಚು ಭಕ್ತರು ಭೇಟಿ ಕೊಡುವ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವಾರು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ.

ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯ ಸೇರಿದಂತೆ ಎಲ್ಲಾ ಮುಜರಾಯಿ ದೇವಸ್ಥಾಗಳಲ್ಲಿ ಭಕ್ತರು ಪ್ರವೇಶಿಸುವ ಮುನ್ನ ವಸ್ತ್ರಸಂಹಿತೆ ಮಾಹಿತಿ ಫಲಕಗಳನ್ನು ಹಾಕಿ ಜಾಗೃತಿ ಮೂಡಿಸಬೇಕು ಎಂದು ವಿಕ್ರಮ್ ಅಯ್ಯಂಗಾರ್ ಹೇಳಿದರು.

ದೇವಸ್ಥಾನದ ಪವಿತ್ರ್ಯತೆ ಮತ್ತು ರಕ್ಷಣೆ ಭಾರತೀಯ ಸಂಸ್ಕೃತಿ ಪಾಲನೆ ಆಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ಪೂರ್ಣ ಮೈಮುಚ್ಚುವಂತಹ ವಸ್ತ್ರ ಧರಿಸಿ
ಭಾರತ ದೇಶದ ಸಂಸ್ಕೃತಿಯ ಪಾಲನೆ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಸೂಕ್ತ ಕ್ರಮವಹಿಸಿ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮೂಲಕ ನೀತಿ ಸಂಹಿತಿ ಜಾರಿಗೆ ತರಲು ಮುಂದಾಗ ಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೂಡ ಮಾಜಿ ಸದಸ್ಯ ನವೀನ್ ಕುಮಾರ್, ನಿರೂಪಕ ಅಜಯ್ ಶಾಸ್ತ್ರಿ, ಚಾಮುಂಡೇಶ್ವರಿ ಭಕ್ತ ವೃಂದದ ಆನಂದ್, ರವಿಚಂದ್ರ, ಮಹಾನ್ ಶ್ರೇಯಸ್, ಮಹೇಶ್, ಬಸವರಾಜ್,ಎಸ್ ಎನ್ ರಾಜೇಶ್ ಮತ್ತಿತರರು ಹಾಜರಿದ್ದರು.