ಮೈಸೂರು: ಬೃಹತ್ ಮುಂಬೈ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮಹಾಯುತಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಿಜೆಪಿಗರು ಸಂಭ್ರಮಿಸಿದರು.
ಚಾಮುಂಡಿಪುರಂ ವೃತ್ತದಲ್ಲಿ ನರೇಂದ್ರ ಮೋದಿ ಅಭಿಮಾನಿ ಬಳಗ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಶನಿವಾರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ.ಡಿ ಪಾರ್ಥಸಾರಥಿ, ಜಗದೀಶ್,ಕೇಬಲ್ ಮಹೇಶ್, ಅಪೂರ್ವ ಸುರೇಶ್, ದೂರರಾಜಣ್ಣ, ಜತ್ತಿ ಪ್ರಸಾದ್, ಆನಂದ್, ನಿವೃತ್ತ ಶಿಕ್ಷಕರಾದ ಮಹಾದೇವಸ್ವಾಮಿ, ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್, ಧರ್ಮೇಂದ್ರ,ಸಿದ್ದಲಿಂಗ ಸ್ವಾಮಿ ಮತ್ತಿತರರು ಹಾಜರಿದ್ದರು.
