ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ಅನೈತಿಕ ಸಂಬಂಧ ಶಂಕಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವರ್ಷದ ರಾಮಕೃಷ್ಣ (45) ಕೊಲೆಯಾದ ವ್ಯಕ್ತಿ.
ತುಮಕೂರು ಜಿಲ್ಲೆ ಮಧುಗಿರಿ ನಿವಾಸಿ ರಮೇಶ್ ಕೊಲೆ ಮಾಡಿದ ಆರೋಪಿ.
ಕೊಲೆಯಾದ ರಾಮಕೃಷ್ಣ ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದರು.
ಇಂದು ಬಿಎಂಟಿಸಿ ಬಸ್ ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್, ರಾಮಕೃಷ್ಣ ಜೊತೆ ಜಗಳವಾಡಿ, ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಹೇಳಿ ನಂತರ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಏರ್ಪೋರ್ಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.