ಮೈಸೂರು ಅ.1: ಗಣೇಶ ಹಬ್ಬದ ಸಂಭ್ರಮಕ್ಕಾಗಿ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನೊಬ್ಬ ಕೊಲೆಯಾದ ಮೈಸೂರಿನ ಮೆಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಮೂಲದ ಗೌರವ್ (20)
ಮಧ್ಯರಾತ್ರಿ ನಡೆದ ಗಲಾಟೆಯಲ್ಲಿ ಹತ್ಯೆಗೀಡಾಗಿದ್ದಾನೆ.
ಹಬ್ಬದ ಪ್ರಯುಕ್ತ ಮೈಸೂರಿಗೆ ಬಂದಿದ್ದ ಗೌರವ್,ಇಲ್ಲೇ ಉಳಿದುಕಿಂಡಿದ್ದ.ಬುಧವಾರ ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಮೇಟಗಳ್ಳಿ ವ್ಯಾಪ್ತಿಯಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಗೆ ತಿರುಗಿದೆ.
ಇದೇ ವಿಚಾರವನ್ನು ದೊಡ್ಡದಾಗಿ ಮಾಡಿದ ಆರೋಪಿಗಳಾದ ಅಭಿ, ಅರ್ಜುನ್ ಮತ್ತು ಆತನ ಗ್ಯಾಂಗ್ ಗೌರವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಗೌರವ್ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಮೇಟಗಳ್ಳಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಅಭಿ, ಅರ್ಜುನ್ ಮತ್ತು ಗ್ಯಾಂಗ್ ಗೆ ಬಲೆ ಬೀಸಿದ್ದಾರೆ.
ಸಣ್ಣ ಜಗಳವೊಂದು ಯುವಕನ ಪ್ರಾಣವನ್ನೇ ಬಲಿ ಪಡೆದಿರುವುದು ನಿಜಕ್ಕೂ ವಿಷಾದನೀಯ.
