ತಿರುವನಂತಪುರಂ: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ್ದು,ಇತಿಹಾಸ ಬರೆದಿದ್ದಾರೆ.
ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಮೊದಲ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.
ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.
ಶಬರಿಮಲೆಗೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.