ಮಂಡ್ಯ: ಮಂಡ್ಯ ಜಿಲ್ಲೆಯ ಮುತ್ತತ್ತಿಯ ಕಾವೇರಿ ನದಿಯಲ್ಲಿ ಐದು ಮಂದಿ ನೀರುಪಾಲಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದ ಐದು ಮಂದಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಈಜಲು ಹೋದಾಗ ಈ ಅವಘಡ ಸಂಭವಿಸಿದೆ.ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
