ಮೈಕ್ರೋ ಫೈನಾನ್ಸ್ ಕಿರುಕುಳ: ಕಠಿಣ ಕಾನೂನ-ಪರಮೇಶ್ವರ್

Spread the love

ಬೆಂಗಳೂರು: ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮೈಕ್ರೋ ಫೈನಾನ್ಸ್‌ನಿಂದ ತೊಂದರೆ ಆಗುತ್ತಿದೆ ಎಂದು ರಾಜ್ಯಾದ್ಯಂತ ದೂರು ದಾಖಲಾಗಿವೆ, ಮೈಕ್ರೋ ಫೈನಾನ್ಸ್ ಸಂಬಂಧ ಈಗ ಇರುವ ನಿಯಮಗಳು ಅಷ್ಟು ಕಠಿಣವಾಗಿಲ್ಲ ಎಂಬಯದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

ಬ್ಯಾಂಕ್ ನಿಯಮಗಳ ಪ್ರಕಾರ ಹಣ ರಿಕವರಿ ಮಾಡಲು ಕಾನೂನು ಇದೆ. ಅದೇ ರೀತಿ ಅವರ ರಕ್ಷಣೆ ಮಾಡಲೂ ಕಾನೂನು ಇದೆ. ಈಗ ಇರುವ ಕಾನೂನು ಸಾಕಾಗುತ್ತಿಲ್ಲ. ಕಠಿಣವಾಗಿಲ್ಲ ಅಂತ ನಮ್ಮ ಇಲಾಖೆಯಿಂದ ಅನೇಕ ವರದಿಗಳು ಬಂದಿವೆ ಹಾಗಾಗಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ತರುವ ಅಗತ್ಯವಿದೆ.ನಮ್ಮ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣಕ್ಕೆ ಕಠಿಣ ಕಾನೂನು ತರಲಿದೆ ಎಂದು ಭರವಸೆ ನೀಡಿದರು.

ಸಾಲ ತಗೊಂಡು ಸಾಲ ವಾಪಸ್ ಕಟ್ಟದೇ ಹೋದ್ರೆ ಸಾಲಗಾರರ ಬಳಿಯೇ ಕ್ರಮ ತೆಗೆದುಕೊಳ್ಳಬಹುದು ಅಂತ ಫೈನಾನ್ಸ್ ಅವರು ಸಹಿ ಹಾಕಿಸಿಕೊಂಡಿರುತ್ತಾರೆ. ಸಾಲ ತಗೋಳೋವಾಗ ಹತ್ತಾರು ಕಡೆ ಸಹಿ ತೆಗೆದುಕೊಂಡಿರುತ್ತಾರೆ. ಆ ಸಹಿ ಯಾಕೆ‌ ಮಾಡಿರುತ್ತೇವೆ ಅಂತಾನೂ ಗ್ರಾಹಕರಿಗೆ ಗೊತ್ತಿರೋದಿಲ್ಲ .ಅದು ಕಮಿಟ್ ಮೆಂಟ್ ಆಗಿರುತ್ತದೆ. ಆ ಆಧಾರದಲ್ಲಿ ಮನೆ ರೇಡ್ ಮಾಡೋದು, ಮನೆ ಸೀಜ್ ಮಾಡೋದು‌ ಎಲ್ಲಾ ಮಾಡ್ತಿದ್ದಾರೆ.ಇದಕ್ಕೆ ‌ಕಾನೂನಿನಲ್ಲೆ ಪರಿಹಾರ ಕಂಡುಹಿಡಿಯಬೇಕಿದೆ ಎಂದು ಪರಮೇಶ್ವರ್ ತಿಳಿಸಿದರು.

ಈಗಾಗಲೇ ಕಾನೂನು ಸಚಿವರು ಅದರ ಬಗ್ಗೆ ಗಮನಹರಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಕಾನೂನು ಬದಲಾವಣೆ ಮಾಡಿ ಕಠಿಣ ನಿಯಮ ಜಾರಿ ಮಾಡುವುದಾಗಿ ಹೇಳಿದ್ದಾರೆ. ನಾಳೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು.