ಮೈಸೂರು, ಬೆಂಗಳೂರಿನಲ್ಲಿ ಐ ಟಿ ದಾಳಿ

ಬೆಂಗಳೂರು:ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು.

ದಾಳಿ ವೇಳೆ ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಉದ್ಯಮಿಗಳು, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಮೈಸೂರಿನಲ್ಲಿ ಕಂಟ್ರಾಕ್ಟರ್, ಇಟ್ಟಿಗೆ ಫ್ಯಾಕ್ಟರಿ ವ್ಯವಹಾರ ಮಾಡುತ್ತಿದ್ದ ರಾಮಕೃಷ್ಣ ಎಂಬುವವರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದಿದೆ.

ರಾಮಕೃಷ್ಣ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲು ಮೂರು ಕಾರಿನಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಬಂದಿದ್ದರು.