ಮೈಸೂರು: ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಪಟಾಕಿ ಸಿಡಿಸಿ ಸಿಹಿ ಹಂಚಿ ಆಚರಿಸುವ ಮೂಲಕ ಪಕ್ಷದ ಮುಖಂಡರು,
ಕಾರ್ಯಕರ್ತರು ಅಭಿಮಾನಿಗಳು ಸಂಭ್ರಮಿಸಿದರು.
ಮೈಸೂರು ಮಹಾನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿಮಾನಿಗಳು ಬಿಎಸ್ ವೈ ಭಾವಚಿತ್ರ ಹಿಡಿದು ಜೈಕಾರ ಹಾಕಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ ಯಡಿಯೂರಪ್ಪನವರು 2008 ರಲ್ಲಿ ಮುಖ್ಯ ಮಂತ್ರಿಯಾಗುವ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರ ಹಿಡಿಯುವಂತಾಯಿತು.ಅದಕ್ಕಾಗಿ ಅವರು ಪಟ್ಟ ಶ್ರಮ ಅಪಾರ.ನಾವೆಲ್ಲ ಅವರ ಮಾರ್ಗ ದರ್ಶನದಲ್ಲಿ ಮುನ್ನಡೆಯೋಣ ಎಂದು ಹೇಳಿದರು.
ಈ ಸಂಭ್ರಮದಲ್ಲಿ ಶಾಸಕ ಟಿ.ಎಸ್ ಶ್ರೀವತ್ಸ, ನಗರ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಸೋಮ್ ಸುಂದರ್, ಪರಿಕ್ಷಿತ್ ರಾಜ ಅರಸ್, ಮಾಜಿ ಮಹಾಪೌರರಾದ ಶಿವಕುಮಾರ್,ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಚಾಮರಾಜ ಕ್ಷೇತ್ರ ಅಧ್ಯಕ್ಷ ದಿನೇಶ್ ಗೌಡ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷ ಗೋಪಾಲ್ ರಾಜ್ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ರಾಕೇಶ್ ಭಟ್, ವಿಶ್ವೇಶ್ವರಯ್ಯ, ಪ್ರಧಾನ ಕಾರ್ಯದರ್ಶಿ ಜಯರಾಮ್,ನಗರ ಪಾಲಿಕೆ ಮಾಜಿ ಸದಸ್ಯರಾದ ಮ ವಿ ರಾಮಪ್ರಸಾದ್, ಎಂಡಿ ಪಾರ್ಥಸಾರಥಿ,ಮುಖಂಡರಾದ ಜೋಗಿ ಮಂಜು, ಕಾರ್ತಿಕ್ ಮರಿಯಪ್ಪ, ಪುನೀತ್, ಲೀಲಾ ಶೆಣೈ, ಸವಿತಾ ಗೌಡ, ಮತ್ತಿತರರು ಹಾಜರಿದ್ದರು.
